ಜಿಲ್ಲೆ

ಭ್ರಷ್ಟಾಚಾರದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯೋಣ?

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: ಭ್ರಷ್ಟಾಚಾರದ ಆಡಳಿತದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಮ್ಮೇಶಗೌಡ ಕರೆ ನೀಡಿದರು.
ಚಿಕ್ಕಬಳ್ಳಾಪುರ ನಗರದ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶತಾಯ ಗತಾಯ ಅಧಿಕಾರವನ್ನು ಹಿಡಿಯಬೇಕೆಂಬ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ಘೋಷಣೆಯ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸಿತು. ಬಳಿಕ ಜಾರಿಯ ಸಂದರ್ಭದಲ್ಲಿ ಸಮರ್ಪಕವಾಗಿ ಸವಲತ್ತುಗಳನ್ನು ಒದಗಿಸಿಲ್ಲ. ಅನೇಕ ಲಾನುಭವಿಗಳು ವಂಚಿತರಾಗಿದ್ದು ನೆರವನ್ನು ಪಡೆಯಲು ತಿಂಗಳಾನುಗಟ್ಟಲೇ ಕಾದು ನೋಡಬೇಕಾದ ಪರಿಸ್ಥಿತಿಯನ್ನು ನಿರ್ಮಿಸಿದೆ. ಮತ್ತೊಂದೆಡೆ ಹಗರಣದಲ್ಲಿ ಕೋಟ್ಯಂತರ ರೂ ಹಣವನ್ನು ಲೂಟಿ ಹೊಡೆಯುತ್ತಿದ್ದು ಅಭಿವೃದ್ಧಿ ಕೆಲಸಗಳಿಗೆ ಅನುದಾನವೇ ಸಿಗುತ್ತಿಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಉಚಿತ ಯೋಜನೆಗಳ ನಡುವೆಯೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಇದನ್ನರಿತುಕೊಂಡು ಪಕ್ಷದ ಕಾರ್ಯಕರ್ತರು ಜನರ ಬಳಿಗೆ ತೆರಳಿ, ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರಾಮಲಿಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ನಿರಂತರವಾಗಿ ಪಕ್ಷದ ಪ್ರಾಬಲ್ಯ ವೃದ್ಧಿಯಾಗುತ್ತಿದೆ. ಮುಂಬರುವ ದಿನಗಳಲ್ಲೂ ಸಂಟನಾತ್ಮಕ ಚಟುವಟಿಕೆ, ಹೋರಾಟವನ್ನು ಕೈಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸಿ.ಮುನಿರಾಜು, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಸೀಕಲ್ ರಾಮಚಂದ್ರಗೌಡ, ವೇಣುಗೋಪಾಲ್, ಕೆ.ವಿ.ನಾಗರಾಜು, ಎಚ್.ಎಸ್.ಮುರಳೀಧರ್, ಮಧು, ಸೂರ್ಯನಾರಾಯಣ್, ಮುರಳಿ ಮತ್ತಿತರರು ಇದ್ದರು.