ಕೋಲಾರ: ಬಿಜೆಪಿ ಚುನಾವಣೆ, ರಾಜಕೀಯಕ್ಕೆ ಮಾತ್ರ ಸಿಮೀತವಾಗಿಲ್ಲ. ಸಾಮಾಜಿಕ ಚಟುವಟಿಕೆಗಳಿಗೂ ಒತ್ತು ನೀಡಿದ್ದು, ಗಣ್ಯರ ಹೆಸರಿನಲ್ಲಿ ಆಯೋಜಿಸುವ ಸಾಮಾಜಿಕ ಕಾರ್ಯಗಳು ಸಮಾಜದಲ್ಲಿ ಸಾಕಾರಗೊಳ್ಳುವಂತೆ ಕಾರ್ಯಕರ್ತರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಸ್ತುವಾರಿ ಕೇಶವ ಪ್ರಸಾದ್ ಹೇಳಿದರು.
ನಗರ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ ಶನಿವಾರ ಹಮ್ಮಿಕೊಂಡಿದ್ದ "ಸೇವಾ ಸ್ವ ಪಾಕ್ಷಿಕ' ಕಾರ್ಯಾಗಾರದಲ್ಲಿ ಮಾತನಾಡಿ, ದೇಶಕ್ಕಾಗಿ ಶ್ರಮಿಸಿದ ಗಣ್ಯರ ಹೆಸರಿನಲ್ಲಿ ಅಭಿಯಾನ ನಡೆಯುತ್ತಿದ್ದು, ಇದರ ಯಶಸ್ಸಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಸೆ.17ರಂದು ನರೇಂದ್ರ ಮೋದಿ ಜನ್ಮದಿನ, ಸೆ.23ರಂದು ದೀನದಯಾಳ್ ಉಪಾಧ್ಯಾಯ ಜಯಂತಿ ಹಾಗೂ ಅ.2ರಂದು ಲಾಲ್ಬಹಾದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಇರುವುದರಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದು ರಾಜಕೀಯ ರಹಿತ ಕಾರ್ಯಕ್ರಮವಾಗಿದ್ದು, ಪಾತೀತವಾಗಿ ಸಮುದಾಯವನ್ನು ಭಾಗಿಯಾಗಿಸಿಕೊಂಡು ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.
ಮಂಡಲದಿಂದ ಜಿಲ್ಲಾಮಟ್ಟದ ತನಕ ಆರೋಗ್ಯ ಶಿಬಿರ, ಸಸಿ ನೆಡುವ ಕಾರ್ಯಕ್ರಮ, ರಕ್ತದಾನ ಶಿಬಿರ, ದೇವಾಲಯ, ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ, ಕಲ್ಯಾಣಿ ಸ್ವಚ್ಛತೆ ಕೈಗೊಳ್ಳಬೇಕು, ಇದು ಬಿಜೆಪಿ ಮಾಡಿದ ಕಾರ್ಯ ಎಂದು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುವಂತೆ ಮಾಡಬೇಕು ಎಂದರು.
ಮಾಜಿ ಸಂಸದ ಮುನಿಸ್ವಾಮಿ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಶೇ.90 ಭಾಗದಲ್ಲಿ ಭ್ರಷ್ಟ ಸಚಿವರಿದ್ದಾರೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸರ್ಕಾರಕ್ಕೆ ಗ್ಯಾರಂಟಿ ಇಲ್ಲವಾಗಿದ್ದು, ಕಾಂಗ್ರೆಸ್ಗೆ ಮತ ಹಾಕಿರುವ ಜನ ಪಶ್ಚಾತಾಪ ಪಡುತ್ತಿದ್ದಾರೆ ಎಂದರು.
ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿರಪ್ಪ, ವೈ.ಸಂಪಂಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಪದಾಧಿಕಾರಿಗಳಾದ ಮಮತಮ್ಮ, ಅರಣಮ್ಮ ಇತರರಿದ್ದರು.
ಸಾಮಾಜಿಕ ಕಾರ್ಯಕ್ಕೂ ಸೈ: ಸೇವಾ ಪಾಕ ಅಭಿಯಾನದ ಅವಧಿಯಲ್ಲಿ ವಿವಿಧ ಸೇವಾ ಚಟುವಟಿಕೆಗಳ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ತಲುಪುವಂತೆ ಮಾಡುವುದು ನಮ್ಮ ಉದ್ದೇಶ. ಅಭಿಯಾನ ಯಶಸ್ವಿಗೊಳಿಸುವ ಜವಾಬ್ದಾರಿ ಮಂಡಲ ಹಾಗೂ ಪದಾಧಿಕಾರಿಗಳ ಮೇಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು. ರಾಜಕೀಯ ಬಿಟ್ಟು ನಾಯಕರ ಜನ್ಮದಿನ ಪ್ರಯುಕ್ತ ಸೇವಾ ಪಾಕದಡಿ ಸಾಮಾಜಿಕ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆನಂತರ ಸರ್ಕಾರದ ಗಮನಕ್ಕೆ ತಂದು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.
100 ಎಫ್ಐಆರ್ ಹಾಕಿದರೂ ಹೆದರಲ್ಲ: ಗಣ್ಯರ ಸಾಧನೆಗಳ ಬಗ್ಗೆ ಯುವಜನತೆಗೆ ತಿಳಿಸುವುದು ಅಭಿಯಾನದ ಮುಖ್ಯ ಉದ್ದೇಶ. ಆರ್ಎಸ್ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಿದೆ. ಇದರಲ್ಲಿ 42 ಸಂಟನೆಗಳು ಸೇರಿದ್ದು, ಅದರಲ್ಲಿ ಬಿಜೆಪಿಯೂ ಒಂದು. ಬಿಜೆಪಿಯ ಪ್ರತಿಯೊಬ್ಬರೂ ಆರ್ಎಸ್ಎಸ್ನವರೇ. ಸಿಎಂ ಸಿದ್ದರಾಮಯ್ಯ ಅವರು ಒಂದಲ್ಲ, ನೂರು ಎಫ್ಐಆರ್ ಹಾಕಿದರೂ ಹೆದರುವವರಿಲ್ಲ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದರು. ಬಂಗಾರಪೇಟೆಯಲ್ಲಿ ಪ್ಯಾಲೆಸೆನ್ ಬಾವುಟ ಪ್ರದರ್ಶಿಸಿದವರ ವಿರುದ್ಧ ಕ್ರಮಕೈಗೊಳ್ಳಲಿಲ್ಲ. ಆದರೆ, ಸಿ.ಟಿ.ರವಿ, ಉಗ್ರಂ ರವಿ ವಿರುದ್ಧ ಸರ್ಕಾರ ದೂರು ದಾಖಲು ಮಾಡಿದೆ. ಈಗ ಸಿದ್ದರಾಮಯ್ಯನವರ ಕಾಲ. ಮುಂದಿನ ದಿನಗಳಲ್ಲಿ ನಮ್ಮ ಕಾಲವೂ ಬರುತ್ತದೆ. ಇದಕ್ಕೆಲ್ಲ ಜನರೇ ಉತ್ತರ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ನಿಂದ ಜನ ವಿರೋಧಿ ನೀತಿ: ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳಿಂದ ಜನ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ವೇಮಗಲ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದೇ ಸಾ. ಸಮಾಜಕ್ಕಾಗಿ ದುಡಿದವರ ಬಗ್ಗೆ ಯುವಕರಿಗೆ ಅರಿವು ಮೂಡಿಸಿದರೆ ಪಕ್ಷವನ್ನು ತಳಮಟ್ಟದಿಂದ ಸಂಟಿಸಲು ಸಹಕರಿಯಾಗುತ್ತದೆ ಎಂದರು.