ಜಿಲ್ಲೆ

ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಲಿ

ರವಿ ಎಸ್. ಬಳೂಟಗಿ

ರೋಣ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ರಕ್ಷಾ ಬಂಧನದ ನಿಮಿತ್ತ ಅಣ್ಣ-ತಂಗಿಯರು ಒಂದು ಗಿಡ ನೆಟ್ಟು ಅದರ ಸಂರಕ್ಷಣೆ ಮಾಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರೋಣ ಮತ್ತು ಎಲ್.ಐ. ದಿಂಡೂರ ಆಂಗ್ಲ ಮಾಧ್ಯಮ ಶಾಲೆ, ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಸರ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಕೃಷಿಯಲ್ಲಿ ರಾಸಾಯನಿಕ ಬಳಕೆ ಮಾಡದೆ ಸಗಣೆ ಗೊಬ್ಬರ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಲ್.ಐ. ದಿಂಡೂರ ಶಾಲೆ ಅಧ್ಯಕ್ಷ ಶಶಿಧರ ಎಲ್. ದಿಂಡೂರು ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡದಿರುವ ಕಾರ್ಯಕ್ರಮಗಳಿಲ್ಲ ಎಂದರು.

ತಾಲೂಕು ಯೋಜನಾ ಅಧಿಕಾರಿ ಮಹಾಬಲೇಶ್ವರ ಪಟಗಾರ, ಮುಖ್ಯಗುರು ಕುಮಾರ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯದ ಮೇಲ್ವಿಚಾರಕರಾದ ರಾಘವೇಂದ್ರ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಈರಮ್ಮ, ನಿವೇದಿತ ಬೇವಿನಕಟ್ಟಿ ಇತರರು ಇದ್ದರು.