ಜಿಲ್ಲೆ

ಮುಂದಿನ ಪೀಳಿಗೆಗೆ ಸುಂದರ ಪರಿಸರ ನೀಡಲಿ

ವೀರೇಶ ಸೌದ್ರಿ

ರೋಣ: ಮನೆಗೊಂದು ಮರ, ಊರಿಗೊಂದು ವನ ಎಂಬಂತೆ ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಸಮಾಜಕ್ಕೆ ಮತ್ತು ಮುಂದಿನ ಪೀಳಿಗೆಗೆ ಸುಂದರ ಪರಿಸರ ನೀಡಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಗದೀಶ ಚನ್ನಗೇರಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸರ್ಕಾರಿ ಪ್ರೌಢಶಾಲೆ ಮುಶಿಗೇರಿ ಆಶ್ರಯದಲ್ಲಿ ಶಾಲಾ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೋಣ ಯೋಜನಾಧಿಕಾರಿ ಮಹಾಬಲೇಶ್ವರ ಪಟಗಾರ, ಯೋಜನೆಯ ಚತುರ್ದಾನಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಶಾಲೆಗೆ ನೀಡುವ ಜ್ಞಾನದೀಪ, ಡೆಸ್ಕ್, ಬೆಂಚ್‌ಗಳು ಮತ್ತು ವಿದ್ಯಾರ್ಥಿಗಳಿಗೆ ನೀಡಲಾಗುವ ಸುಜ್ಞಾನನಿಧಿ ಶಿಷ್ಯವೇತನದ ಬಗ್ಗೆ ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಮನೋಹರ ಗಟ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಧರ್ಮಸ್ಥಳ ಯೋಜನೆ ಶ್ರಮಿಸುತ್ತಿದೆ. ಸಂಸ್ಥೆಯ ಕಾರ್ಯ ಎಲ್ಲರೂ ಮೆಚ್ಚುವಂಥದ್ದು ಎಂದರು.

ತಾಲೂಕಿನ ಕೃಷಿ ಮೇಲ್ವಿಚಾರಕ ಶಂಭುಲಿಂಗ ಅರಗಂಜಿ ನಿರೂಪಿಸಿದರು. ವಲಯದ ಮೇಲ್ವಿಚಾರಕಿ ಮಹಾದೇವಿ ಮಾಳಗಿ ಸ್ವಾಗತಿಸಿದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಗಳಾದ ಕವಿತಾ ಹಿರೇಮಠ, ಸುನಂದಾ ಕುರಿ, ಶಿಕ್ಷಕರಾದ ಶರಣಪ್ಪ ಕಿಟಗೇರಿ, ಚಂದ್ರಶೇಖರ್ ಉಪ್ಪಾರ, ವೀರಯ್ಯ ಸಾಲಿಮಠ, ನಿಂಗಪ್ಪ ಮತಗೂರ ಇದ್ದರು.