ಸಿಂಧನೂರು ತಹಸಿಲ್ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು. ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ ಅರಳಹಳ್ಳಿ, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಬಾಷಾ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ ಇತರರಿದ್ದರು. 
ಜಿಲ್ಲೆ

ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಗೆ ನೀಡಲಿ

ಸಿಂಧನೂರು: ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಒತ್ತಾಯಿಸಿ, ನಮ್ಮ ಕರ್ನಾಟಕ ಸೇನೆಯಿಂದ ನಗರದ ತಹಸಿಲ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ತಹಸೀಲ್ದಾರ್ ಅರುಣಕುಮಾರ ದೇಸಾಯಿ ಧರಣಿ ನಿರತ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ, ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮೃತ ಮಹಿಳೆಯ ಸಂಬಂಧಿಕರು, ತಹಸೀಲ್ದಾರ್ ಮುಂದೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡವನ್ನು ಬಿಚ್ಚಿಟ್ಟರು. ಘಟನೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು.

ಅಲ್ಲದೇ ಮೃತ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು. ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್, ಸರ್ಕಾರಿ ಆಸ್ಪತ್ರೆಯಲ್ಲಿ ಆದ ಲೋಪಗಳ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಮುಂದೆ ಈ ತರಹದ ಅವಘಡಗಳು ಆಗದಂತೆ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದರು. ಡಿವೈಎಸ್ಪಿ ಬಿ.ಎಸ್.ತಳವಾರ ಇದ್ದರು.

ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಸಾಬ್ ಚಿಟಗಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾವನಿ ಇತರರಿದ್ದರು.