ನಿಪ್ಪಾಣಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಭೆಯಲ್ಲಿ ಮಹಾದೇವಿ ನಾಯಿಕ ಮಾತನಾಡಿದರು. ಶಾಂತಾರಾಮ ಜೋಗಳೆ, ಎಸ್.ಎಸ್. ಯಲ್ಲಟ್ಟಿ ಇತರರು ಇದ್ದರು. 
ಜಿಲ್ಲೆ

ಬಲಿಷ್ಠ ಭಾರತ ಕಟ್ಟುವತ್ತ ಶ್ರಮಿಸಲಿ

ರಾಘವೇಂದ್ರಗೌಡ ಭೀ ಪಾಟೀಲ್

ನಿಪ್ಪಾಣಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಬಲಿಷ್ಠ ಭಾರತ ಕಟ್ಟುವಲ್ಲಿ ಕೊಡುಗೆ ನೀಡಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ ಹೇಳಿದರು.

ಕೆಎಲ್‌ಇ ಸಂಸ್ಥೆಯ ಸ್ಥಳೀಯ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶಾಂತಾರಾಮ ಜೋಗಳೆ ಮಾತನಾದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಬಿ. ಕಡೆಪ್ಪಗೋಳ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಖಜಾಂಚಿ ಎಸ್.ಆರ್. ನುರ್ಜೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಯಲ್ಲಟ್ಟಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ಎಂ. ಪಡಲಿಹಾಳೆ ಇತರರಿದ್ದರು.