ಜಿಲ್ಲೆ

ಯೋಜನೆ ಅನುಷ್ಠಾನಕ್ಕೆ ಸಹಕರಿಸಲಿ

ವೀರೇಶ ಸೌದ್ರಿ

ಮುಂಡರಗಿ: ಪಟ್ಟಣದ ಪುರಸಭೆ ಮೈದಾನದಲ್ಲಿ ಆ.30ರಂದು ಬೆಳಗ್ಗೆ 10ಗಂಟೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ 2ಸಾವಿರ ರೂ. ವರ್ಗಾಯಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅರ್ಹ ಫಲಾನುಭವಿಗಳು ಸಮಾರಂಭದಲ್ಲಿ ಪಾಲ್ಗೊಂಡು ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ವೈ.ಎನ್.ಗೌಡರ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಸರ್ಕಾರದ ಕಾರ್ಯಕ್ರಮವಾಗಿದ್ದು, ಅದನ್ನು ಅನುಷ್ಠಾನಗೊಳಿಸುವ ಕುರಿತಂತೆ ಪುರಸಭೆ ಮೈದಾನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಪಾಲ್ಗೊಳ್ಳಬೇಕು. ಆ ಮೂಲಕ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಪುರಸಭೆ ಸದಸ್ಯರಾದ ನಾಗರಾಜ ಹೊಂಬಳಗಟ್ಟಿ, ಮಹ್ಮದ್‌ರಫೀಕ್ ಮುಲ್ಲಾ ಇದ್ದರು.