ವಿಧಾನ ಪರಿಷತ್ ಚುನಾವಣೆ ಸಲುವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರ ಬೈಂದೂರು ಬಿಜೆಪಿ ಮಂಡಲದ ನೇತೃತ್ವದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತಿತರರು ಇದ್ದರು.  
ಜಿಲ್ಲೆ

ಸಾಮಾನ್ಯ ಕಾರ್ಯಕರ್ತನನ್ನು ಗೆಲ್ಲಿಸೋಣ

ಇಂದಿರಾ ಎನ್ ಕೆ

ಕುಂದಾಪುರ: ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಿಗೆ ಕಸ್ತೂರಿ ರಂಗನ್ ಆತಂಕ ಶುರುವಾಗಿದ್ದು, ಈ ಬಗ್ಗೆ ಜನರ ಆತಂಕ, ಅಹವಾಲುಗಳನ್ನು ಸಂಸದನಾಗಿ ಕೇಂದ್ರದ ಗಮನಕ್ಕೆ ತರುವಂಥ ಕಾರ್ಯ ಮಾಡಲಾಗುವುದು. ಇದರ ಜತೆಗೆ ನೈಸರ್ಗಿಕ ವಿಕೋಪ ತಡೆಯಬೇಕಾದರೆ ಕಾಡು, ಪ್ರಕೃತಿ ಉಳಿಯಬೇಕು. ಜನರ ಜೀವನವೂ ಉಳಿಯಬೇಕು. ಕಾಡು ಉಳಿದಿದ್ದರೆ ಅದು ಅಲ್ಲಿ ನೆಲೆಸಿರುವ ಜನರಿಂದ ಮಾತ್ರ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸೋಮವಾರ ತ್ರಾಸಿ, ಕಂಬದಕೋಣೆಯಲ್ಲಿ ವಿಧಾನ ಪರಿಷತ್ ಚುನಾವಣೆ ಸಲುವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರ ಬೈಂದೂರು ಬಿಜೆಪಿ ಮಂಡಲದ ನೇತೃತ್ವದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗ್ರಾಪಂ ನ ನೈಜ ಅಭಿವೃದ್ಧಿಗೆ ಆರ್ಥಿಕ ಶಕ್ತಿ ಕೊಟ್ಟಿರುವುದು ನರೇಂದ್ರ ಮೋದಿಯವರು. ಅವರ ನೇತೃತ್ವದಲ್ಲಿ ಗ್ರಾಮೀಣ ವಿಕಾಸ ಆಗುತ್ತಿದೆ. ಅದಕ್ಕೆ ಇನ್ನಷ್ಟು ಶಕ್ತಿ ತುಂಬುವ ಕಾರ್ಯ ನಾವು ಮಾಡಬೇಕಿದೆ. ಪಕ್ಷ ಈ ಪರಿಷತ್ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ, ಪಕ್ಷಕ್ಕೆ ದುಡಿದವರನ್ನು ಗುರುತಿಸಿ ಅಭ್ಯರ್ಥಿಯಾಗಿಸಿದೆ. ಅವರನ್ನು ನಾವೆಲ್ಲರೂ ಗೆಲ್ಲಿಸುವ ಕಾರ್ಯ ಮಾಡುವ ಎಂದವರು ಮನವಿ ಮಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಮಾಜಿ ಸಂಸದ , ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪಕ್ಷದ ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಜೇಶ್ ಕಾವೇರಿ, ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ನೇರಳಕಟ್ಟೆಯ ರಾಜೇಂದ್ರ ಕುಮಾರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಅಭ್ಯರ್ಥಿ ಕಿಶೋರ್ ಕುಮಾರ್, ಪ್ರಮುಖರಾದ ರಾಜೇಶ್ ಕಾವೇರಿ, ಸತೀಶ್ ಹಡಾಳಿ, ದೀಪಕ್ ಶೆಟ್ಟಿ ಮತ್ತಿತರರಿದ್ದರು.