ರಿಷಿ ಆನಂದ  
ಜಿಲ್ಲೆ

ಜಿಲ್ಲೆಯಲ್ಲಿ ದುಡಿಯೋಣ ಬಾ ಅಭಿಯಾನ

ಗಿರೀಶ ಸಗರ

ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದವರಿಗೆ ಸತತವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಿ.ಪಂ. ವತಿಯಿಂದ ದುಡಿಯೋಣ ಬಾ ಅಭಿಯಾನ ಆಯೋಜಿಸಲಾಗಿದೆ.

ಮಾ. 15 ರಂದು ಜಿಲ್ಲೆಯ 13 ತಾಲೂಕಿನಲ್ಲಿ ದುಡಿಯೋಣ ಬಾ ಅಭಿಯಾನ ಯಶಸ್ವಿಯಾಗಿ ಆರಂಭವಾಗಿದ್ದು, ಜೂನ್​ ಮಾಹೆಯ ಅಂತ್ಯದವರೆಗೆ ಈ ಅಭಿಯಾನ ನಡೆಯಲಿದೆ ಎಂದು ಜಿಪಂ ಸಿಇಒ ರಿಷಿ ಆನಂದ ಅವರು ತಿಳಿಸಿದ್ದಾರೆ.

ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯಲು ಅವಕಾಶವಿದೆ. ಬೇಸಿಗೆ ಅವಧಿಯಲ್ಲಿ 100 ದಿನ ಕೆಲಸ ನಿರ್ವಹಿಸಿದ್ದಲ್ಲಿ 37 ಸಾವಿರ ರೂ. ಪಾವತಿಸಲಾಗುತ್ತಿದೆ. ಅಲ್ಲದೆ, ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡುವ ಜತೆಗೆ ನರೇಗಾ ಯೋಜನೆಯಡಿ ಕೂಲಿ ದರವನ್ನು ಏ. 1 ರಿಂದ 349 ರೂಗಳಿಂದ 370ಕ್ಕೆ ರೂ.ಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅವರು ಹೇಳಿದರು.

ಪ್ರತಿ ಗ್ರಾಪಂನಲ್ಲಿ ಸ್ವ&ಸಹಾಯ ಸಂಗಳ ಸದಸ್ಯರನ್ನೊಳಗೊಂಡು ಅರಿವು ಕಾರ್ಯಕ್ರಮ ಆಯೋಜಿಸಿ ಮಹಿಳಾ ಭಾಗವಹಿಸುವಿಕೆ ಪ್ರಮಾಣ ಶೇ.60 ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಗಳ ಎಲ್ಲ ಯೋಜನೆಗಳ ಮಾಹಿತಿಗಾಗಿ, ಏಕೀಕೃತ ಸಹಾಯವಾಣಿ ಸಂಖ್ಯೆ 8277506000 ಹಾಗೂ ಜಿಲ್ಲಾ ಪಂಚಾಯಿತಿ ನರೇಗಾ ಸಹಾಯವಾಣಿ ಸಂಖ್ಯೆ 9480831699ಕ್ಕೆ ಸಂಪರ್ಕಿಸುವಂತೆ ಅಥವಾ ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಸಿಇಒ ರಿಷಿ ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024&25 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 1,58,119 ಕುಟುಂಬಗಳ ಪೈಕಿ ಒಟ್ಟು 2,54,912 ಕೂಲಿ ಕಾರ್ಮಿಕರು ಮನರೇಗಾ ಯೋಜನೆಯಡಿ ಉದ್ಯೋಗ ಪಡೆದಿದ್ದಾರೆ.