ರಾಯಚೂರು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ದಕ್ಷ ಆಡಳಿತ ನೀಡುತ್ತಿರುವುದಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ., ಅವರಿಗೆ ರಾಜ್ಯ ಸರ್ಕಾರವು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿರುವ ವಿಷಯವನ್ನು ಮುಖ್ಯಮಂತ್ರಿಗಳು ಮೇ ತಿಂಗಳಿನಲ್ಲಿ ನಡೆಸಿದ ಸಭೆಯಲ್ಲಿ ಗಮನಿಸಿ ಜಿಲ್ಲಾಧಿಕಾರಿ ನಿತೀಶ್ ಕೆ., ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಾಮಾಜಿಕ ನೆರವು ಯೋಜನೆಯ ಪ್ರಗತಿ ಸಾಧನೆಗಾಗಿ ಪ್ರಶಂಸನಾ ಪತ್ರವನ್ನು ಹೊರಡಿಸಲು ಸಹ ಮುಖ್ಯಮಂತ್ರಿಗಳು ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಈ ವಿಶೇಷ ಸಾಧನೆಗಾಗಿ ಅಭಿನಂದನೆ ತಿಳಿಸಿದ್ದಾರೆ.