ಜಿಲ್ಲೆ

ನಾಲೆಗಳಿಗೆ ಕೂಡಲೇ ನೀರು ಹರಿಸಿಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ತಕ್ಷಣ ನೀರು ಹರಿಸಬೇಕು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಕೆಆರ್‌ಎಸ್ ಡ್ಯಾಂ ಸುತ್ತ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಸೋಮವಾರ ಹಕ್ಕೊತ್ತಾಯ ಪತ್ರ ಸಲ್ಲಿಸಿತು.

ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಕಳೆದ ವರ್ಷ ಬರಗಾಲದಿಂದ ನೀರಿಲ್ಲದೆ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡು ಪಾಲಾಯಿತು. ಇದೀಗ ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಶ್ವೇಶ್ವರಯ್ಯ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರು ಹರಿಸಲು ಸರ್ಕಾರ ಕಾಮಗಾರಿಯ ಕುಂಟು ನೆಪ ಹೇಳುತ್ತಿದೆ ಕಿಡಿಕಾರಿದರು.

ಬಿಜೆಪಿ ಕಾರ್ಯಕರ್ತರಾದ ಧರಣಿ, ಶಂಕರ್, ಹೊಸಹಳ್ಳಿ ಶಿವು, ಎಚ್.ಕೆ.ಮಂಜುನಾಥ್, ಶಿವರಾಜು, ಶಿವಶಂಕರ್, ಕೃಷ್ಣಪ್ಪ, ಸಂದೇಶ್, ಗುರಪ್ಪ ಇದ್ದರು.