ಮಸ್ಕಿ: ವಿದ್ಯಾರ್ಥಿಗಳು ಜ್ಞಾನವಂತರಾಗಬೇಕಾದರೆ ಪುಸ್ತಕದೊಂದಿಗೆ ಗೆಳೆತನ ಮಾಡಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿ ಗ್ರಂಥಾಲಯವನ್ನು ಸೋಮವಾರ ಉದ್ಘಾಟಿಸಿ ಮಾಡಿ ಮಾತನಾಡಿದರು. ಸರ್ಕಾರ ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳಿಗಾಗಿ ಹೈಟೆಕ್ ಗ್ರಂಥಾಲಯ ನಿರ್ಮಾಣ ಮಾಡಿದೆ. ಗ್ರಂಥಾಲಯದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ. ಸಾರ್ವಜನಿಕರು ಪುಸ್ತಕಗಳನ್ನು ಓದುವ ಮೂಲಕ ತಮ್ಮ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದನ್ನು ಓದಿ: ಗ್ಯಾರಂಟಿ ಯೋಜನೆಗೆ ಪ್ರತ್ಯೇಕ ಕಚೇರಿ ಆರಂಭ
ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್, ಪ್ರಮುಖರಾದ ಮಲ್ಲಯ್ಯ ಮುರಾರಿ, ಆನಂದ ವೀರಾಪುರ,ರಮೇಶ ಕಾಸ್ಲಿ, ಕೃಷ್ಣಚಿಗರಿ, ಶಬ್ಬೀರ್‌ಸಾಬ್ ಚೌದ್ರಿ ಇತರರಿದ್ದರು.