ಜಿಲ್ಲೆ

ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವೈ.ಟಿ. ಹೊನ್ನತ್ತಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಾಲತೇಶ ನಿಂಗಪ್ಪ ನವಲೆ (26) ಮೃತ ವ್ಯಕ್ತಿ.

ಈತ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಜಮೀನಿನ ರೇಷ್ಮೆ ಗೋದಾಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.