ಹಾನಗಲ್ಲ: ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
ಜಿನ್ನಪ್ಪ ಬಸವಂತಪ್ಪ ಕಲಗುದರಿ (65) ಮೃತ ವೃದ್ಧ.
ಇವರು ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.