ಹಾನಗಲ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಸ್ಸೀಂ ಆಲದಕಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಆನಂದ ದುರಗಪ್ಪ ನಾಯಕ (48) ಮೃತ ವ್ಯಕ್ತಿ.
ಈತ ನಿಸ್ಸೀಂ ಆಲದಕಟ್ಟಿ ಗ್ರಾಮದಲ್ಲಿ ಉಳಿದುಕೊಂಡಿದ್ದು ಯಾವುದೋ ಕಾರಣಕ್ಕೆ ಮಾನಸಿಕ ಮಾಡಿಕೊಂಡು ಜಮೀನುವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.