ಅಮೀನಗಡದ ಸಂಗಮೇಶ್ವರ ಸಂಯುಕ್ತ ಪಪೂ ಕಾಲೇಜಿನ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್ ಚಟುವಟಿಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಗಿರಿಧರ ಪೂಜಾರ ಅವರನ್ನು ಸನ್ಮಾನಿಸಲಾಯಿತು. ಎಂ.ಎನ್. ವಂದಾಲ, ಆರ್.ಜಿ. ಸನ್ನಿ ಇತರರಿದ್ದರು. 
ಜಿಲ್ಲೆ

ಉತ್ತಮ ಸಂಸ್ಕಾರದಿಂದ ಬದುಕು ಉಜ್ವಲ

ದತ್ತಾತ್ರೇಯ ಪಿ ಕುಲಕರ್ಣಿ

ಅಮೀನಗಡ: ವಿದ್ಯಾರ್ಥಿಗಳಲ್ಲಿ ಮೌಲ್ಯಾಧರಿತ ಶಿಕ್ಷಣ ಜತೆಗೆ ಉತ್ತಮ ಸಂಸ್ಕಾರ ಬಿತ್ತನೆಯಾದಲ್ಲಿ ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ ಎಂದು ಧಾರವಾಡ ಕ್ಲಾಸಿಕ್ ಸ್ಟಡಿ ಸರ್ಕಲ್‌ನ ಸಂಪನ್ಮೂಲ ವ್ಯಕ್ತಿ ಗಿರಿಧರ ಪೂಜಾರ ಹೇಳಿದರು.

ಪಟ್ಟಣದ ಸಂಗಮೇಶ್ವರ ಸಂಯುಕ್ತ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ನಿರ್ಣಾಯಕ ಘಟ್ಟವಾಗಿದ್ದು, ನಿರ್ದಿಷ್ಟ ಗುರಿ ಹೊಂದಿ ಅದರೆಡೆಗೆ ನಿರಂತರ ಪರಿಶ್ರಮ ಹಾಗೂ ಪ್ರಯತ್ನಪಟ್ಟಲ್ಲಿ ಯಶಸ್ಸು ನಿಶ್ಚಿತ ಎಂದರು.

ಕಾಲೇಜಿನ ಹಳೆಯ ವಿದ್ಯಾರ್ಥಿ, ಸಿವಿಲ್ ನ್ಯಾಯಾಧೀಶೆ ಭಾಗ್ಯಶ್ರೀ ಮಾದರ ಮಾತನಾಡಿ, ಶಿಕ್ಷಣ ಎಂಬುದು ಅಂಕಗಳಿಗಷ್ಟೆ ಸೀಮಿತವಲ್ಲ. ಅದರಾಚೆಗೂ ಸ್ವಉದ್ಯೋಗ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹೇರಳ ಅವಕಾಶಗಳಿವೆ. ಆತ್ಮಸ್ಥೈರ್ಯದಿಂದ ಮುನ್ನುಗ್ಗಿದರೆ ಯಾವುದೂ ಅಸಾಧ್ಯವಲ್ಲ ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಭುಶಂಕರೇಶ್ವರ ಗಚ್ಚಿನಮಠದ ಶಂಕರ ರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.

ಪ್ರಾಚಾರ್ಯ ಎಂ.ಎನ್. ವಂದಾಲ, ಉಪ ಪ್ರಾಚಾರ್ಯ ಆರ್.ಜಿ. ಸನ್ನಿ, ನಿರ್ದೇಶಕರಾದ ಶಿವು ಹಿರೇಮಠ, ಎಸ್.ಜಿ. ಮೊಕಾಶಿ, ಉಪನ್ಯಾಸಕರಾದ ಆರ್.ಜಿ. ಬಡಿಗೇರ, ಜಿ.ಎಂ. ಡೊಳ್ಳಿನ, ಎಂ.ಎಸ್. ಕಾರಭಾರಿ, ಆರ್.ಐ. ಮುಜಾವರ ಇತರರಿದ್ದರು.