ಜಿಲ್ಲೆ

ಇತರರಿಗೂ ಮಾದರಿಯಾದರೆ ಬದುಕು ಸಾರ್ಥಕ: ಪ್ರೊ.ಎಂ.ಕೃಷ್ಣೇಗೌಡ ಹೇಳಿಕೆ

ಸುಳ್ಯ: ಜೀವನದಲ್ಲಿ ಇತರರಿಗೆ ಮಾದರಿಯಾಗುವಂತೆ ನಡೆದುಕೊಂಡರೆ ಆ ಜನ್ಮ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ಕೆ.ವಿ.ಜಿ. ಸುಳ್ಯ ಹಬ್ಬದಲ್ಲಿ ಇತ್ತೀಚೆಗೆ ಮಾತನಾಡಿದರು.

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಡಾ.ಎನ್.ಎ.ಜ್ಞಾನೇಶ್, ಪ್ರಧಾನ ಕಾರ್ಯದರ್ಶಿ ಕೆ.ರಾಜು ಪಂಡಿತ್, ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಉಪಸ್ಥಿತರಿದ್ದರು.

ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ, ಹಿರಿಯ ವೈದ್ಯ ಡಾ.ಎಂ.ವಿ.ಶಂಕರ ಭಟ್ ಅವರಿಗೆ ಕೆವಿಜಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯುವ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಜು ಪಂಡಿತ್ ಸ್ವಾಗತಿಸಿದರು. ಅಧ್ಯಕ್ಷ ಡಾ.ಎನ್.ಎ.ಜ್ಞಾನೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಹಾಗೂ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮ ನಿರೂಪಿಸಿದರು.