ಬಸವನಬಾಗೇವಾಡಿಯ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಚಾಲನೆ ನೀಡಿದರು. ಶಿವಾನಂದ ಮಂಗಾನವರ, ವಸಂತ ರಾಠೋಡ, ಎಸ್.ಎಸ್. ಅವಟಿ, ರಮೇಶ ಪೂಜಾರಿ ಇತರರಿದ್ದರು. 
ಜಿಲ್ಲೆ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಸಸಿಯಂತೆ

ಬಸವನಬಾಗೇವಾಡಿ: ಕ್ರೀಡಾ ಚಟುವಟಿಕೆಗಳು ಮನುಷ್ಯನ ವ್ಯಕ್ತಿತ್ವವನ್ನು ಹೆಚ್ಚಿಸುವುದರೊಂದಿಗೆ ಮನುಷ್ಯನ ಆರೋಗ್ಯ ಮತ್ತು ಸದೃಢ ದೇಹವನ್ನು ಸೃಷ್ಠಿಸುತ್ತದೆ ಎಂದು ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾ ಚಟುವಟಿಕೆಯಲ್ಲಿ ತೊಡಗುವುದರಿಂದ ಸದೃಢ ಆರೋಗ್ಯ ಕಾಪಡಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಆಸಕ್ತಿ ಕಡಿಮೆಯಾಗುತ್ತಿದ್ದು. ಸಾಮಾಜಿಕ ಜಾಲತಾಣಗಳತ್ತ ಯುವಕರು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಅಧ್ಯಕ್ಷತೆ ವಹಿಸಿದ್ದರು. ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್. ಅವಟಿ, ಉಪಪ್ರಾಚಾರ್ಯ ರಮೇಶ ಪೂಜಾರಿ, ಎಂ.ಎಸ್. ಝಳಕಿ, ಚಂದ್ರ ಹದಿಮೂರ, ಅಣ್ಣಪ್ಪ ಬಿದ್ದನಾಳ, ಕೊಟ್ರೇಶ ಹೇಗಡಿಹಾಳ, ಶಿವಾನಂದ ಮಡಿಕೇಶ್ವರ, ಯಲ್ಲಪ್ಪ ಹಳವರ, ಡಿ.ಎಸ್. ಬಾಗೇವಾಡಿ, ನೇತಾಜಿ ಗಾರಗೆ, ಪಿ.ಎಂ. ಜೋರಾಪುರ, ಎಸ್. ಶಿವಯೋಗಿ ಇತರರಿದ್ದರು.