ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆ ವತಿಯಿಂದ ಮಾಜಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನಾ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 29ರಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ನ್ಯಾಯಮೂರ್ತಿ ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳಾದ ಪ್ರದಿಪ್ ಪ್ರಭಾಕರ್, ಮಂಜುಶ್ರೀ ಅವರಿಗೆ ಸಾಧನಾ ಪುರಸ್ಕಾರ ಹಾಗೂ ಯುಪಿಎಸ್ಸಿ ಸಾಧಕರಿಗೆ ಸನ್ಮಾನ ನಡೆಯಲಿದೆ.
ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಪತ್ರಕರ್ತ ಹರಿಪ್ರಸಾದ್ ಭಾಗವಹಿಸಿಲಿದ್ದಾರೆ.