ಆಲ್ದೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. 
ಜಿಲ್ಲೆ

ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ

Shivamogga - Desk - Vinayakumar D B

ಆಲ್ದೂರು: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಬಸ್ ನಿಲ್ದಾಣದ ಸಮೀಪ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಮೋದಿ ಪರ ಘೋಷಣೆಗಳನ್ನು ಕೂಗಿದರು. ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್, ರವೀಂದ್ರ, ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್.ಕವೀಶ್, ಮಹಿಳಾ ಮೋರ್ಚಾ ತಾಲೂಕು ಉಪಾಧ್ಯಕ್ಷರಾದ ಚಂಪಾ ಜಗದೀಶ್, ಭವ್ಯಾ ನಟೇಶ್, ತಾಲೂಕು ಖಜಾಂಚಿ ಶಿವಕುಮಾರ್, ಎಸ್‌ಇ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ, ಎಸ್‌ಟಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕರ್, ಯುವ ಮೋರ್ಚಾ ಅಧ್ಯಕ್ಷ ಸಿಂಧೂಕುಮಾರ್ ಇತರರಿದ್ದರು.