ಹೊಸಪೇಟೆ: ಸೇವಿಯರ್ ಸಂಸ್ಥೆ ಅಂಧರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದು ಡಿಡಿಪಿಯು ನೋಡಲ್ ಅಧಿಕಾರಿ ನಾಗರಾಜ ಹವಾಲ್ದಾರ್ ಹೇಳಿದರು.
ಇದನ್ನೂ ಓದಿ:ರಾಜ್ಯ ಮಟ್ಟದ ಅಂಧರ ಚೆಸ್ ಪಂದ್ಯಾವಳಿಗೆ ಚಾಲನೆ
ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಕ್ಲಬ್, ಸೇವಿಯರ್ ಅಂಗವಿಕಲರ ಸೇವಾ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಮೂರು ದಿನಗಳ ಅಂಧರ ರಾಜ್ಯಮಟ್ಟದ ಚೆಸ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೇವಿಯರ್ ಸಂಸ್ಥೆ ಅಂಧರ ಬಾಳಿಗೆ ಬೆಳಕಾಗಿದೆ. ಚೆಸ್‌ನಲ್ಲಿ ಪಾಲ್ಗೊಂಡ ಎಲ್ಲರೂ ಗೆದ್ದಂತೆ ಎಂದರು.
ವಿಜಯನಗರ ಕಾಲೇಜಿನ ಪ್ರಾಧ್ಯಾಪಕ ಶರಣಬಸವೇಶ್ವರ ಮಾತನಾಡಿ, ಕಣ್ಣಿದ್ದು ಕುರುಡರಾಗಿರುವವರ ಮಧ್ಯೆ ಒಳಗಣ್ಣಿನಿಂದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗಾಗಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಸರಿ ಇದ್ದರೂ ಜನರಿಗೆ ಒಳ್ಳೆಯ ಕೆಲಸ ಮಾಡುತ್ತಿಲ್ಲ. ವಿಕಲಚೇತನರು ಎಲ್ಲ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ ಎಂದರು.
ಎಂಎಸ್‌ಪಿಎಲ್ ಸಿಎಸ್‌ಆರ್ ಮುಖ್ಯಸ್ಥ ನಾಗರಾಜ, ರೋಟರಿ ಕ್ಲಬ್ ಅಧ್ಯಕ್ಷ ದೀಪಕ್ ಕುಮಾರ್, ಸೇವಿಯರ್ ಅಂಗವಿಕಲರ ಸೇವಾ ಸಮಿತಿ ಸಂಸ್ಥಾಪಕ ಕಾರ್ಯದರ್ಶಿ ಸಂತೋಷ ಕುಮಾರ್ ಇತರರಿದ್ದರು.