ಜಿಲ್ಲೆ

ವಿದ್ಯುತ್ ಸ್ಪರ್ಶಿಸಿ ಲೈನ್‌ಮನ್ ಮೃತ್ಯು

ಇಂದಿರಾ ಎನ್ ಕೆ

ಬೈಂದೂರು: ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಸೋಮವಾರ ಮಧ್ಯಾಹ್ನ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಲೈನ್‌ಮನ್, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ನಿವಾಸಿ ಸಲೀಂ(38) ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಎರಡು ತಿಂಗಳ ಮಗುವನ್ನು ಅಗಲಿದ್ದಾರೆ. ಬೈಂದೂರು ಮೆಸ್ಕಾಂನಲ್ಲಿ 8 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.