ಲಿಂಗಸುಗೂರಿನಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಚಾಲನೆ ನೀಡಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ, ಟಿಎಪಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ್ ಆಶಿಹಾಳ, ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು ಇತರರಿದ್ದರು. 
ಜಿಲ್ಲೆ

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ

ಲಿಂಗಸುಗೂರು: ವಿದ್ಯಾರ್ಥಿಗಳು ಪಠ್ಯದ ಜತೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಪುರ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಸದೃಢ ದೇಹ, ಆರೋಗ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಪ್ರತಿಭೆ ಹೊರಹಾಕಲು ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಸತತ ಪ್ರಯತ್ನದ ಮೂಲಕ ಯಶಸ್ಸು ಸಿಗಲಿದೆ. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

ಲಿಂಗಸುಗೂರು, ಗುರುಗುಂಟಾ, ಖೈರವಾಡಗಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ, ಟಿಎಪಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ್ ಆಶಿಹಾಳ, ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು, ಸದಸ್ಯ ಪ್ರಮೋದ ಕುಲಕರ್ಣಿ, ಜಗದೀಶಗೌಡ ಮಾಲಿಪಾಟೀಲ್, ಚನ್ನಾರೆಡ್ಡಿ ಬಿರಾದಾರ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಮುರುಗೇಂದ್ರಪ್ಪ, ಶಂಕ್ರಪ್ಪ ರಾಠೋಡ, ಕಾಳಿಂಗಪ್ಪ ಇತರರಿದ್ದರು.