ಹೆಲ್ಮೆಟ್ ಜಾಗೃತಿ ನಿಮಿತ್ತ ಲಿಂಗಸುಗೂರು ಪೊಲೀಸ್ ಠಾಣೆಯಿಂದ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಪೊಲೀಸರಿಂದ ಬೈಕ್ ರ‌್ಯಾಲಿ ನಡೆಸಲಾಯಿತು. ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ್, ಪಿಎಸ್‌ಐ ನಾಗಪ್ಪ ಇತರರಿದ್ದರು. 
ಜಿಲ್ಲೆ

ಬೈಕ್ ಸವಾರರು ಹೆಲ್ಮೆಟ್ ಧರಿಸಲಿ

ಲಿಂಗಸುಗೂರು: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಲಾಖೆಯಿಂದ ಮಂಗಳವಾರ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು.

ಜು.15ರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲದಿದ್ದರೆ 500 ರೂ. ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುಗಮ ಸಂಚಾರ ಹಾಗೂ ಅಪಘಾತ ತಡೆಯಲು ನಿಯಮ ಪಾಲಿಸಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬಸ್ ನಿಲ್ದಾಣ, ಅಮರೇಗೌಡ ಆಸ್ಪತ್ರೆ, ಬಸವಸಾಗರ, ಗಡಿಯಾರ ಸರ್ಕಲ್ ಮೂಲಕ ಬೈಕ್ ರ‌್ಯಾಲಿ ನಡೆಸಲಾಯಿತು. ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ್, ಪಿಎಸ್‌ಐ ನಾಗಪ್ಪ ಇತರರಿದ್ದರು.