ಜಿಲ್ಲೆ

ಬಾಲಕಾರ್ಮಿಕ ಪದ್ಧತಿಯಿಂದ ಶೈಕ್ಷಣಿಕ ಪ್ರಗತಿ ಕುಂಠಿತ, ಹೆಚ್ಚುವರಿ ಸಿವಿಲ್ ನ್ಯಾಯಮೂರ್ತಿ ಶಿವಕುಮಾರ ದೇಶಮುಖ್ ಅಭಿಮತ

ಕುರುವತ್ತಿ ಶ್ರೀಕಾಂತಪ್ಪ

ಲಿಂಗಸುಗೂರು: ಬಾಲಕಾರ್ಮಿಕ ಪದ್ಧತಿಯಿಂದ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿ ಮತ್ತು ಭವಿಷ್ಯ ಹಾಳಾಗುತ್ತದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಮೂರ್ತಿ ಶಿವಕುಮಾರ ದೇಶಮುಖ್ ಹೇಳಿದರು.

ಪಟ್ಟಣದ ಜ್ಞಾನ ಸಂಜೀವಿನಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಇತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ಸಮಾಜದಿಂದ ತೊಲಗಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸಂವಿಧಾನಾತ್ಮಕವಾಗಿ ಶಿಕ್ಷಣ ಪಡೆಯುವುದು ಪ್ರತಿ ಬಾಲಕರ ಕರ್ತವ್ಯವಾಗಿದೆ. ಬಾಲಕಾರ್ಮಿಕ ಪದ್ಧತಿ ಗಮನಿಸಿಯೂ ಅಪರಾಧಕ್ಕೆ ಪ್ರೇರಣೆ ನೀಡುವ ಪ್ರಕರಣ ಕಂಡು ಬಂದರೆ ತಕ್ಷಣ ದೂರು ನೀಡಬೇಕೆಂದು ಹೇಳಿದರು.

ಗ್ರೇಡ್-2 ತಹಸೀಲ್ದಾರ್ ಬಸವರಾಜ ಝಳಕಿಮಠ, ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ ಗಸ್ತಿ, ಜಿಲ್ಲಾ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರಡ್ಡಿ, ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ಹನುಮೇಶ, ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಬಿಇಒ ಹುಂಬಣ್ಣ ರಾಠೋಡ್, ಎಎಸ್‌ಐ ಚನ್ನಪ್ಪ, ಸಿಡಿಪಿಒ ಗುರುಪ್ರಸಾದ, ಶಾಲಾ ಮುಖ್ಯಸ್ಥ ರವಿಕುಮಾರ ಕುಲಕರ್ಣಿ ಇತರರಿದ್ದರು.