ಲಿಂಗಸುಗೂರು, ವಾಂತಿ-ಭೇದಿ, ಆರೋಗ್ಯದಲ್ಲಿ ಚೇತರಿಕೆ, ಶುದ್ಧ ಕುಡಿವ ನೀರು, ಪೂರೈಕೆ, Lingasuguru, vomiting-dysentery, recovery in health, clean drinking water, supply,
ಲಿಂಗಸುಗೂರು: ತಾಲೂಕಿನ ಚಿತ್ತಾಪುರದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿಗೆ ತುತ್ತಾದ ರೋಗಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಗ್ರಾಮದ ಜನತೆಗೆ ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ಪಾಂಡ್ವೆ ಹೇಳಿದರು.
ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಚಿತ್ತಾಪುರದಲ್ಲಿ ವಾಂತಿ-ಬೇಧಿಗೆ ತುತ್ತಾದ ರೋಗಿಗಳಿಗೆ ಗ್ರಾಮದ ತಾತ್ಕಾಲಿಕ ಆರೋಗ್ಯ ಕೇಂದ್ರ, ರೋಡಲಬಂಡಾ(ಯುಕೆಪಿ) ಮತ್ತು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ರೋಗಿಗಳು ಗುಣಮುಖರಾಗಿದ್ದಾರೆ. ಉಳಿದವರ ಆರೋಗ್ಯದಲ್ಲೂ ಸುಧಾರಣೆ ಕಂಡು ಬಂದಿದ್ದು, ಯಾವುದೇ ತೊಂದರೆ ಇಲ್ಲ ಎಂದರು.
ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಎಲ್ಲ ಜಲಮೂಲಗಳನ್ನು ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬದಲಾವಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನಲ್ಲಿ ಸ್ಥಗಿತಗೊಂಡ ಆರ್‌ಒ ಪ್ಲಾಂಟ್‌ಗಳ ಮಾಹಿತಿ ಪಡೆದಿದ್ದು, ಕ್ರಿಯಾಯೋಜನೆ ತಯಾರಿಸಿ ದುರಸ್ತಿಗೊಳಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ನವ ವಿವಾಹಿತೆ ಆತ್ಮಹತ್ಯೆ
ಇದಕ್ಕೂ ಮುನ್ನ ವಾಂತಿ-ಬೇಧಿ ಪೀಡಿತ ಚಿತ್ತಾಪುರ ಗ್ರಾಮಕ್ಕೆ ತೆರಳಿ ತಾತ್ಕಾಲಿಕ ಆರೋಗ್ಯ ಕೇಂದ್ರ ಹಾಗೂ ರೋಡಲಬಂಡಾ(ಯುಕೆಪಿ) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ರೋಗಿಗಳ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರು, ಅಧಿಕಾರಿಗಳ ಜತೆ ಸಭೆ ನಡೆಸಿದರು.
ಗ್ರಾಮದಲ್ಲಿ ಪೂರೈಸುವ ಕುಡಿವ ನೀರು ಸ್ಥಗಿತಗೊಳಿಸಿದರೂ ವಾಂತಿ-ಭೇದಿ ಪ್ರಕರಣ ಕಂಡು ಬರುತ್ತಿವೆ ಎಂದರೆ ಕಾಲರಾ ಶಂಕೆ ವ್ಯಕ್ತಪಡಿಸಿದ ಅವರು, ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ರಕ್ತ ಮತ್ತು ಊಟದ ಮಾದರಿ ಸಂಗ್ರಹಿಸಿ ಪರೀಕ್ಷಿಸಬೇಕು. ಶುದ್ಧ ಕುಡಿವ ನೀರು ಪೂರೈಸುವ ಜತೆಗೆ ಗ್ರಾಮದ ಜನರ ಆರೋಗ್ಯ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಡಿಎಚ್‌ಒ ಡಾ.ಸುರೇಂದ್ರ ಬಾಬು, ಎಸಿ ಅವಿನಾಶ ಶಿಂಧೆ, ತಾಪಂ ಇಒ ಅಮರೇಶ ಯಾದವ್, ಮುಖ್ಯವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ್, ಡಾ.ಚಂದ್ರಕಾಂತ, ಡಾ.ಶೋಭಾ ಇತರರಿದ್ದರು.