ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಾಗ ‘ಲಿಂಗಾಯತ’ ಎಂದು ನಮೂದಿಸಿರುವ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಸಮುದಾಯದವರು ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 
ಜಿಲ್ಲೆ

‘ಲಿಂಗಾಯತ’ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹ

ಗೋಕಾಕ: ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ‘ಲಿಂಗಾಯತ’ ಎಂದು ನಮೂದಿಸಿಯೇ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಮುಖಾಂತರ ಸಮುದಾಯದವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮಾಜ ಬಾಂಧವರು ಇಲ್ಲಿಯ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಶ್ರೀ ನೇತೃತ್ವದಲ್ಲಿ ಶುಕ್ರವಾರ ನಗರದ ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ಮೂಲಕ ತೆರಳಿ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು. 2002ರ ವರೆಗೆ ಕಂದಾಯ ಇಲಾಖೆಯವರು ‘ಲಿಂಗಾಯತ’ ಎಂದು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದರು. ಈಗ ವೀರಶೈವ-ಲಿಂಗಾಯತ ಎಂದು ಪ್ರಮಾಣ ಪತ್ರ ನೀಡಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಮೊದಲಿನಂತೆ ಲಿಂಗಾಯತ ಎಂಬ ಜಾತಿ ಪ್ರಮಾಣ ಪತ್ರ ನೀಡಿ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಸಂಜಯ ಪಾಟೀಲ, ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಶಕುಂತಲಾ ಕಟ್ಟಿ ಸೇರಿದಂತೆ ಸಮುದಾಯದ ಬಾಂಧವರು ಇದ್ದರು.