ಜಿಲ್ಲೆ

ಲಯನ್ಸ್ ವಿದ್ಯಾಸಂಸ್ಥೆ ವಿದ್ಯಾರ್ಥಿ ಸಂಘದ ಪದಗ್ರಹಣ

ಸುನಿಲ್ ಪೊನ್ನೇಟಿ

ಮಡಿಕೇರಿ:

ಗೋಣಿಕೊಪ್ಪಲು ಲಯನ್ಸ್ ವಿದ್ಯಾಸಂಸ್ಥೆಯ 2025 ಮತ್ತು 26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಗುರುವಾರ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ.ಎನ್ ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ. ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್ಗಳನ್ನು ಲಯನ್ಸ್ ವಿತರಿಸಲಾಯಿತು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರಾದ ಸಿ.ಬಿ. ಲತಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ. ಪದಾಧಿಕಾರಿಗಳು ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿ.ಎಸ್. ಗಾನ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.