ಜಿಲ್ಲೆ

ಸೇವಾ ಮನೋಭಾವ ಬೆಳೆಸಿಕೊಳ್ಳಿ: ಲಯನ್ಸ್ ಸಂಸ್ಥೆ ನೂತನ ಅಧ್ಯಕ್ಷ ಮಹಾಲಿಂಗೇಗೌಡ ಹೇಳಿಕೆ

ಮಂಡ್ಯ: ಸಮಾಜದಲ್ಲಿ ಸೇವೆ ಮಾಡುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದು ಮುಖ್ಯವಾಗಬೇಕು ಎಂದು ಸಕ್ಕರೆ ನಾಡು ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಹೇಳಿದರು.

ನಗರದ ಅಗ್ರಿಕ್ಲಬ್‌ನಲ್ಲಿ ಆಯೋಜಿಸಿದ್ದ ಪದಗ್ರಹಣ ಹಾಗೂ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧನಾ, ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೊಂದವರ ಬಡವರ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ನಮ್ಮ ಲಯನ್ಸ್ ಸಂಸ್ಥೆ ವತಿಯಿಂದ ಮಾಡಲಾಗುವುದು. ವೈದ್ಯರಿಗೆ ಎಲ್ಲರೂ ಗೌರವ ಕೊಡುತ್ತಾರೆ. ವೈದ್ಯ ವೃತ್ತಿ ಅತ್ಯಂತ ಪವಿತ್ರವಾಗಿದೆ. ಉತ್ತಮ ಸೇವೆ ಮಾಡಿದವರನ್ನು ಗುರುತಿಸಿ ನಮ್ಮ ಲಯನ್ಸ್ ಸಂಸ್ಥೆಯು ಸನ್ಮಾನಿಸಿ ಗೌರವಿಸುತ್ತಿದೆ ಎಂದರು.

ಮಾಜಿ ಗರ್ವನರ್ ನಾಗರಾಜ ವಿ.ಭೈರಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ. ರೈತ ದಿನಾಚರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಗಮನ ಸೆಳೆದಿದ್ದೇವೆ, ಇದಕ್ಕೆಲ್ಲ ನಿಮ್ಮ ಸಹಕಾರವೇ ಸಾಧ್ಯವಾಯಿತು ಎಂದು ತಿಳಿಸಿದರು.

ಮಾಜಿ ಗರ್ವನರ್ ಲಯನ್ ಬಿ.ಪಿ.ದಿವಾಕರ್, ಸಕ್ಕರೆ ನಾಡು ಲಯನ್ ಸಂಸ್ಥೆ ಮಾಜಿ ಅಧ್ಯಕ್ಷ ಕೆ.ಆರ್.ಶಶಿಧರ್ ಈಚಗೆರೆ, ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು, ಲಯನ್ಸ್‌ನ ಎಚ್.ಮಾದೇಗೌಡ, ಎಚ್.ಜಿ.ವಿಠಲ, ಅಜಯ್ ಕುತ್ನಿಕರ್, ಚಂದ್ರಶೇಖರ್, ರಾಜಶೇಖರ್ ಇತರರಿದ್ದರು.