ಸವಣೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವೃದ್ಧರೊಬ್ಬರು ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟ ಘಟನೆ ತಾಲೂಕಿನ ಕಾರಡಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹಸನಸಾಬ ರಾಜೇಸಾಬ ನದಾಫ್ (65) ಮೃತ ವೃದ್ಧ.
ಇವರು ವಿಪರೀತ ಮದ್ಯ ಸೇವಿಸುತ್ತಿದ್ದರು. ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.