ಜಿಲ್ಲೆ

ಕನ್ನಡ ಭವನದಲ್ಲೇ ಸಾಹಿತ್ಯ ಸಮ್ಮೇಳನ

ಎನ್.ವೆಂಕಟೇಶ್

ಏ.23ರಂದು ಉದ್ಘಾಟನೆ | ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಸಭೆ

ಚಿಕ್ಕಬಳ್ಳಾಪುರ : ನಗರದಲ್ಲಿನ ನೂತನ ಕನ್ನಡ ಭವನ ಉದ್ಘಾಟನೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏ.23 ಹಾಗೂ ಏ.24ರಂದು ಆಯೋಜಿಸಲಾಗಿದೆ.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ

ಬುಧವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.

ನಗರದಲ್ಲಿ ಕರ್ನಾಟಕ ಗಹಮಂಡಳಿಯು ಕನ್ನಡ ಭವನವನ್ನು 17.83 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದೆ. ನೂತನ ಕಟ್ಟಡವನ್ನು ಏ.23ರಂದು ಉದ್ಘಾಟಿಸಲಿದ್ದು, ಈ ಭವನದಲ್ಲೇ 2 ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ಡಿ.ಎಂ. ರವಿಕುವಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ. ಕೊಡಿರಂಗಪ್ಪ, ಕಾರ್ಯದರ್ಶಿ ಅಮೃತ್ ಕುವಾರ್, ಖಜಾಂಚಿ ಮಲ್ಲಿಕಾರ್ಜುನ್, ತಾಲೂಕು ಅಧ್ಯಕ್ಷ ಯಲುವಳ್ಳಿ ಎನ್.ಸೊಣ್ಣೇಗೌಡ, ಜಿಲ್ಲಾ ಜಂಟಿ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಮತ್ತಿತರರು ಇದ್ದರು.

ಸಮ್ಮೇಳನಕ್ಕೆ ಸಿದ್ಧತೆ : ಸಮ್ಮೇಳನದ ಅಂಗವಾಗಿ ಬೆಳಗ್ಗೆ 8.30ಕ್ಕೆ ಕನ್ನಡ ಭವನ ಮುಂಭಾಗದಲ್ಲಿ ರಾಷ್ಟ್ರಧ್ವಜ, ನಾಡಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಲಿದೆ. 9.15ಕ್ಕೆ ನಗರದ ಅಂಬೇಡ್ಕರ್ ಭವನದಿಂದ ಪ್ರಾರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ. ಇದೇ ವೇಳೆ ನಗರದ ಎಲ್ಲ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿನಿವಾ ಪ್ರದರ್ಶಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.