ಭದ್ರಾವತಿಯಲ್ಲಿ ವಿಎಚ್‌ಪಿ, ಬಜರಂಗದಳ ಏರ್ಪಡಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಕೃಷ್ಣ-ರಾಧೆ ವೇಷಧಾರಿ ಪುಟಾಣಿಗಳಿಗೆ ಪ್ರಶಸ್ತಿ ನೀಡಲಾಯಿತು. ಮಹಾಬಲೇಶ್, ಮಣಿ, ನಾರಾಯಣ ವರ್ಣೇಕರ್, ಹಾ.ರಾಮಪ್ಪ ಇತರರಿದ್ದರು. 
ಜಿಲ್ಲೆ

ಕೃಷ್ಣ-ರಾಧೆಯರಾಗಿ ಮಿಂಚಿದ ಪುಟಾಣಿಗಳು

Shivamogga - Desk - Vinayakumar D B

ಭದ್ರಾವತಿ: ವಿಶ್ವ ಹಿಂದು ಪರಿಷತ್, ಬಜರಂಗದಳದಿಂದ ಇಲ್ಲಿನ ಹೊಸಮನೆ ಹಿಂದು ಮಹಾಸಭಾ ಸಭಾಭವನದಲ್ಲಿ ವಿಶ್ವ ಹಿಂದು ಪರಿಷತ್ ಸ್ಥಾಪನಾ ದಿನ ಹಾಗೂ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಏರ್ಪಡಿಸಿದ್ದ ಕೃಷ್ಣ-ರಾಧೆ ಛದ್ಮವೇಷ ಸ್ಪರ್ಧೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಪಾಲ್ಗೊಂಡ ಎಲ್ಲ ಮಕ್ಕಳಿಗೂ ಬಹುಮಾನ ವಿತರಿಸಲಾಯಿತು.

ಕ್ಷತ್ರಿಯ ಸತ್ಸಂಗ ಪ್ರಮುಖ ಮಹಾಬಲೇಶ್, ನಗರಸಭೆ ಸದಸ್ಯ ಮಣಿ, ಜಿಲ್ಲಾ ಕಾರ್ಯದರ್ಶಿ ನಾರಾಯಣ ವರ್ಣೇಕರ್, ವಿಎಚ್‌ಪಿ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಹಾ.ರಾಮಪ್ಪ, ಜಿಲ್ಲಾ ಸಹ ಕಾರ್ಯದರ್ಶಿ ಧರಣೇಶ್, ಜಿಲ್ಲಾ ಸೇವಾ ಪ್ರಮುಖ ದತ್ತಾತ್ರಿ, ಜಿಲ್ಲಾ ಸಂಯೋಜಕ ರಾಘವನ್ ವಡಿವೇಲು, ಆಕಾಶ್, ಸಂಜು, ಕಿರಣ್, ಸವಾಯಿ ಸಿಂಗ್ ಇತರರಿದ್ದರು.