ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಪ್ರತಿಯೊಬ್ಬರು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಗೌರವಯುತ ಜೀವನ ನಡೆಸಬಹುದು. ರಾಮಾಯಣದಲ್ಲಿ ರಾಮನಿಗೆ ಎಷ್ಟು ಮಹತ್ವ ಇದೆಯೋ ಮಹರ್ಷಿ ವಾಲ್ಮೀಕಿಯವರಿಗೂ ಅಷ್ಟೇ ಮಹತ್ವವಿದೆ. ಅವರು ಮಹಾಕಾವ್ಯವನ್ನು ರಚಿಸುವ ಮೂಲಕ ಆದಿ ಕವಿ, ಮಹಾಕವಿ ಎಂದು ಪ್ರಖ್ಯಾತಿ ಪಡೆದರು ಎಂದು ಶಾಸಕ ಮಹೇಶ ಟೆಂಗಿನಕಾಯಿ ಬಣ್ಣಿಸಿದರು.
ಇಲ್ಲಿಯ ಮಿನಿ ವಿಧಾನಸೌಧದ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರಾಮಾಯಣದ ಮೌಲ್ಯಗಳು ಎಲ್ಲರ ಜೀವನಕ್ಕೆ ದಾರಿದೀಪವಾಗಿವೆ. ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮಹಾವಿದ್ಯಾಲಯದ ನಿವೃತ್ತ ಉಪನ್ಯಾಸಕ ಪೊ›.ಕೆ.ಎಸ್.ಕೌಜಲಗಿ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಸಮಾಜದ ಹಿರಿಯರನ್ನು ಸನ್ಮಾನಿಸಲಾಯಿತು. ಹುಡಾ ಅಧ್ಯಕ್ಷ ಶಾಕೀರ ಸನದಿ, ತಹಶೀಲ್ದಾರರಾದ ಪ್ರಕಾಶ ನಾಶಿ, ಕಲಗೌಡ ಪಾಟೀಲ, ತಾಪಂ ಇಒ ಯಶವಂತ ಕುಮಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಶಿ ಮೀನಾಕ್ಷಿ ಗುದುಗಿಯವರ, ಗುರುನಾಖ ಉಳ್ಳಿಕಾಶಿ, ಪ್ರೇಮನಾಥ ಚಿಕ್ಕತುಂಬಳ, ಅಶೋಕ ವಾಲ್ಮೀಕಿ, ರವಿ ಬೀಳಗಿ, ಶಾಂತಮ್ಮ ಗುಂಜಳ, ಭಾರತಿ ಟಪಾಲ, ಇತರರು ಇದ್ದರು.