ಕಾರಟಗಿಯಲ್ಲಿ ರಮೇಶ ಸಿ.ಬನ್ನಿಕೊಪ್ಪ ಅವರ ‘ಹಾಫ್ ಚಹಾ’ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿ.ಬಿ ಚಿಲ್ಕರಾಗಿ, ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ, ಜಿಲ್ಲಾ ಕೋಶಾಧ್ಯಕ್ಷ ರಮೇಶ ಕುಲಕರ್ಣಿ, ಮುಖ್ಯಶಿಕ್ಷಕ ಮಹಾಂತೇಶ ಗದ್ದಿ, ಕಸಾಪ ನಿಕಟಪೂರ್ವ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ, ಬಸವರಾಜ ರ್ಯಾವಳದ ಇತರರಿದ್ದರು. 
ಜಿಲ್ಲೆ

ಸಹಬಾಳ್ವೆಯಿಂದ ಬದುಕು ನಡೆಸಿ

ರುದ್ರಪ್ಪ ವಾಲಿ

ಕಾರಟಗಿ: ಯುವಕರಲ್ಲಿನ ದುಶ್ಚಟ ಹೋಗಲಾಡಿಸಲು ಅವರಲ್ಲಿ ಸಾಹಿತ್ಯ ಅಭಿರುಚಿ, ಕಲೆ, ಸಂಸ್ಕೃತಿ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕು ಎಂದು ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿ.ಬಿ ಚಿಲ್ಕರಾಗಿ ಹೇಳಿದರು.

ಪಟ್ಟಣದ ಶ್ರೀ ಶರಣಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಮತ್ತು ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬರಹಗಾರ ರಮೇಶ ಸಿ.ಬನ್ನಿಕೊಪ್ಪ ಹಲಗೇರಿ ಅವರ ‘ಹಾಫ್ ಚಹಾ’ ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದು-ಮುಸ್ಲಿಂರ ಸೌಹಾರ್ದತೆಗೆ ಧಕ್ಕೆ ಆಗಬಾರದು.

ಮುಸ್ಲಿಂರು ಉದಾತ್ತವಾದ, ಆಧ್ಯಾತ್ಮಿಕ ಚಿಂತನೆಯಿಂದ ಬೆಳೆದು ಬಂದಿದ್ದಾರೆ. ಧರ್ಮದ ಬಗೆಗಿನ ಅಜ್ಞಾನದಿಂದ ಸಂಘರ್ಷ ಸೃಷ್ಟಿಯಾಗುತ್ತಿದೆ. ಸಮಾಜಕ್ಕೆ ಆತಂಕ ತಂದೊಡ್ಡುವ ಕೆಲಸ ಯುವಕರು ಮಾಡಬಾರದು. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ಆಗಬೇಕು. ಇತ್ತೀಚಿನ ದಿನಗಳಲ್ಲಿ ದೊಂಬಿ, ಕೊಲೆ ಸಂಘರ್ಷಗಳು ಸಂಭವಿಸಿದಾಗ ಜಾತಿ ಹುಡುಕುವ ಕೆಲಸ ಆಗುತ್ತಿದೆ. ಅಂತಹ ಘಟನೆಗಳು ಮರುಕಳಿಸಬಾರದು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಸಾಹಿತ್ಯ, ಕಲೆಯಂತಹ ಸೃಜನಶೀಲ ಚಟುವಟಿಕೆಗಳಿಂದ ಮಾತ್ರ ಸೌಹಾರ್ದಯುತ ಸಮಾಜ ಕಟ್ಟಲು ಸಾಧ್ಯ ಎಂದರು. ಕವಿಗೋಷ್ಠಿಯಲ್ಲಿ 15ಕ್ಕೂ ಹೆಚ್ಚು ಯುವ ಕವಿಗಳು ಕವಿತೆ ವಾಚನ ಮಾಡಿದರು.

ಎಸ್.ಎಂ.ಮೊಹೀದ್ದಿನ್, ಸಿಂಧನೂರಿನ ಸರ್ಕಾರಿ ಪದವಿ ಕಾಲೇಜಿನ ಪ್ರಾದ್ಯಾಪಕ ರಾಮಣ್ಣ ಹಿರೇಭೇರಿಗಿ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ರಮೇಶ ಕುಲಕರ್ಣಿ, ಕಸಾಪ ತಾಲೂಕಾಧ್ಯಕ್ಷ ಶರಣಪ್ಪ ಕೋಟ್ಯಾಳ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಚಿಕ್ಕೇನಕೊಪ್ಪ, ಸದಸ್ಯರಾದ ರಮೇಶ ಮಾವಿನಮಡಗು, ಮಲ್ಲಿಕಾರ್ಜುನ ಯತ್ನಟ್ಟಿ, ಶಿವಲೀಲಾ ಅಯೋಧ್ಯ ಪ್ರಮುಖರಾದ ಬಸವರಾಜ ರ್ಯಾವಳದ, ರಮೇಶ ಸಿ.ಬನ್ನಿಕೊಪ್ಪ, ಬಸವರಾಜ ಶೆಟ್ಟರ್ ಇತರರಿದ್ದರು.

-----

0812-ಕೆಆರ್ಟಿ-ಶರಣಪ್ಪ 1