ಜಿಲ್ಲೆ

ಲಾಕ್‌ಡೌನ್ ವಿಸ್ತರಣೆ ಸ್ವಾಗತಾರ್ಹ - ರಮೇಶ ಜಾರಕಿಹೊಳಿ

Belagavi

ಬೆಳಗಾವಿ: ಕರೊನಾ ವೈರಸ್ ಸೋಂಕಿತರ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜದ ಆರೋಗ್ಯ ಸಂರಕ್ಷಣೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಾಕ್‌ಡೌನ್ ಅವಧಿಯನ್ನು ಮೇ 3ರ ವರೆಗೆ ವಿಸ್ತರಣೆ ಮಾಡಿರುವುದು ಸ್ವಾಗತಾರ್ಹ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ವಿಶ್ವದ ಎಲ್ಲ ದೇಶಗಳಲ್ಲಿ ಕರೊನಾ ವೈರಸ್ ದಿನದಿಂದ ದಿನಕ್ಕೆ ಅಧಿಕ ಪ್ರಮಾಣದಲ್ಲಿ ಹರಡುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲ ಮನೆಯಲ್ಲಿದ್ದುಕೊಂಡು ಕರೊನಾ ವೈರಸ್ ಸಂಪೂರ್ಣ ನಿರ್ಮೂಲನೆಗಾಗಿ ಕೈ ಜೋಡಿಸಬೇಕು. ಲಾಕ್‌ಡೌನ್ ನಿಯಮಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು.

ಈಗಾಗಲೇ ಸರ್ಕಾರವು ದಿನಸಿ, ತರಕಾರಿ ಹಾಗೂ ಅಗತ್ಯ ವಸ್ತು, ಜನಜೀವನಕ್ಕೆ ಬೇಕಿರುವ ಸೌಕರ್ಯ ಮನೆ ಮನೆಗೆ ಪೂರೈಸಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಹಾಗಾಗಿ, ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಮಾಜದ ಆರೋಗ್ಯ ಕಾಪಾಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಸಲಹೆ ನೀಡಿದ್ದಾರೆ.