ಜಿಲ್ಲೆ

ಲಾಕ್‌ಡೌನ್ ಸಡಿಲಿಕೆ ಬಳಿಕ ಸೋಂಕು ಹೆಚ್ಚಳ - ಸುರೇಶ ಅಂಗಡಿ

Belagavi

ಬೆಳಗಾವಿ: ಲಾಕ್‌ಡೌನ್ ಸಡಿಲಿಕೆಯಿಂದ ಕರೊನಾ ಸೋಂಕು ಪ್ರಕರಣ ಹೆಚ್ಚುತ್ತಿವೆ. ಹಸಿರು ವಲಯದಲ್ಲೂ ಪ್ರಕರಣ ಪತ್ತೆಯಾಗಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯು ಕಿತ್ತಳೆಯಿಂದ ಕೆಂಪು ವಲಯಕ್ಕೆ ಹೋಗುವ ಆತಂಕವಿದೆ. ಲಾಕ್‌ಡೌನ್ ವಿಚಾರವಾಗಿ ಕೆಲವರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಸಚಿವ ಅಂಗಡಿ ಹೇಳಿದ್ದಾರೆ.