ಜಿಲ್ಲೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಲೋಗೋ ಬಳಸುವಿಕೆ ಕಡ್ಡಾಯ

ಕೆ.ಎನ್.ರಾಘವೇಂದ್ರ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲ ಇಲಾಖೆಯಲ್ಲಿಯೂ ನಿರ್ದಿಷ್ಟ ಲೋಗೋ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

1974, 1994ರ ನಂತರ 2024ನೇ ಸಾಲಿನಲ್ಲಿ ಮತ್ತೆ 3ನೇ ಬಾರಿಗೆ ಮಂಡ್ಯ ಜಿಲ್ಲೆಗೆ ಸಮ್ಮೇಳವನ್ನು ಆಚರಿಸಲು ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಅದರಂತೆ, ಸಮ್ಮೇಳನವನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಮ್ಮೇಳನ ಆಚರಣೆಯ ಸಂಬಂಧ ವ್ಯಾಪಕ ಪ್ರಚಾರ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ನಿಗಮ- ಮಂಡಳಿಗಳು ತಮ್ಮ ಕಚೇರಿಯ ಪ್ರತಿ ಪತ್ರ ವ್ಯವಹಾರದಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ಸಂಭ್ರಮ-50 ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಿಹ್ನೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದ್ದಾರೆ.