ಯಕ್ಸಂಬಾ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆ ಅವಲೋಕನ ಸಭೆಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ದುರ್ಯೋಧನ ಐಹೊಳೆ, ಮಹೇಶ ಕುಮಠಳ್ಳಿ, ಸತೀಶ ಅಪ್ಪಾಜಿಗೋಳ ಇತರರು ಇದ್ದರು. 
ಜಿಲ್ಲೆ

ಲೋಕ ಸಮರದಲ್ಲಿ ಬಿಜೆಪಿ ಗೆಲುವು ಖಚಿತ

ಪ್ರಶಾಂತ ಹೂಗಾರ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.

ಯಕ್ಸಂಬಾ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆ ಅವಲೋಕನ ಸಭೆ ಹಾಗೂ ಮತ ಎಣಿಕೆ ಏಜೆಂಟರ ಸಭೆ ನಡೆಸಿ ಮಾತನಾಡಿದರು. ಜೂ.4ರಂದು ನಡೆಯುವ ಮತ ಎಣಿಕೆಯಲ್ಲಿ ತಾವು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಶಾಸಕರಾದ ದುರ್ಯೋಧನ ಐಹೊಳೆ, ಶಶಿಕಲಾ ಜೊಲ್ಲೆ ಹಾಗೂ ಮಾಜಿ ಶಾಸಕ ಮಹೇಶ ಕುಮಠಳ್ಳಿ, ಎಂಎಲ್‌ಸಿ ಹಣಮಂತ ನಿರಾಣಿ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತ್ಥಪುರ, ಉಜ್ವಲಾ ಬಡವನಾಚೆ, ಬಾಳಾಸಾಹೇಬ ವಡ್ಡರ ಇತರರು ಇದ್ದರು.