ಜಿಲ್ಲೆ

ಮುಕ್ತ, ಶಾಂತಿಯುತ ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಿ

ಧಾರವಾಡ: ಜಿಲ್ಲೆಯ ಮತದಾರರು ಮುಕ್ತ ಹಾಗೂ ಶಾಂತಿಯುತವಾಗಿ ಮತದಾನ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಲೋಕಸಭೆ ಕ್ಷೇತ್ರದ ಸಾಮಾನ್ಯ ವೀಕ್ಷಕ ಅಜಯ ಗುಪ್ತಾ ಸೂಚಿಸಿದರು.
ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಚುನಾವಣಾಽಕಾರಿ ಹಾಗೂ ಹಿರಿಯ ಅಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮನೆಯಿಂದ ಮತದಾನ ಮಾಡಲು ನೋಂದಾಯಿತ ಹಿರಿಯ ನಾಗರಿಕರು, ಅಂಗವಿಕಲರಿಗೆ ಅಗತ್ಯ ವ್ಯವಸ್ಥೆ ಮಾಡಬೇಕು. ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸುವಿಧಾ ಮತ್ತು ಸಿ- ವಿಜಲ್ ಆ್ಯಪ್ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಜಿಲ್ಲಾ ಚುನಾವಣಾಽಕಾರಿ ದಿವ್ಯ ಪ್ರಭು ಚುನಾವಣಾ ತಯಾರಿಯನ್ನು ವಿವರಿಸಿದರು.
ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹಾಗೂ ಜಿಲ್ಲಾ ಪೊಲೀಸ್ ಅಽÃಕ್ಷಕ ಡಾ. ಗೋಪಾಲ ಬ್ಯಾಕೋಡ ಬಂದೋಬಸ್ತ್ ವ್ಯವಸ್ಥೆಯ ಮಾಹಿತಿ ನೀಡಿದರು.
ಜಿಲ್ಲಾ ಸ್ವೀಪ್ ನೋಡಲ್ ಅಽಕಾರಿ ಸ್ವರÀÆಪ ಟಿ.ಕೆ. ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಽಕಾರಿ ಮೋನಾ ರೋತ್, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ವಿವಿಧ ವಿಭಾಗಗಳ ಅಽಕಾರಿಗಳು, ಚುನಾವಣಾ ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.