ಜಿಲ್ಲೆ

ಮುರಾರ್ಜಿ ಶಾಲೆಗೆ ಲೋಕಾಯುಕ್ತ ಡಿವೈಎಸ್‌ಪಿ ಭೇಟಿ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕಿÀ ವೀಣಾ ನಾಯ್ಕ್ ಕೂಡಿಗೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವಕ್ಕೆ ಒತ್ತು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈ ಸಂದರ್ಭ ಸ್ಪಷ್ಟ ನಿರ್ದೇಶನ ನೀಡಿದರು.

ಮುಂದಿನ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು ಬರದಂತೆ ಗಮನಹರಿಸಬೇಕು ಎಂದು ದಿನಕರ ಶೆಟ್ಟಿ ಸೂಚಿಸಿದರು. ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಸಿಬ್ಬಂದಿ ಇದ್ದರು.