ಜಿಲ್ಲೆ

ಖಾನಾಪುರ ತಹಸೀಲ್ದಾರ ಪ್ರಕಾಶ ಗಾಯಕವಾಡ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪ್ರಕಾಶ ಗಾಯಕವಾಡ ನಿಪ್ಪಾಣಿಯಲ್ಲಿರುವ ಮತ್ತೊಂದು ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆಯೂ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಬೆಳಗಾವಿ: ಅಕ್ರಮ‌ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ತಹಸೀಲ್ದಾರ ಪ್ರಕಾಶ ಗಾಯಕವಾಡ ಅವರ ಗಣೇಶಪುರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ.