ಜಿಲ್ಲೆ

ಲೋಕಾಯುಕ್ತ ಪೊಲೀಸರಿಂದ ದೂರು ಸ್ವೀಕಾರ

ನಾಗೇಶ ಎಸ್

ಎಚ್.ಡಿ.ಕೋಟೆ: ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮೇ 8ರಂದು ಕರ್ನಾಟಕ ಲೋಕಾಯುಕ್ತ ಮೈಸೂರು ಪೊಲೀಸ್ ಅಧೀಕ್ಷಕರು ಹಾಗೂ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಸಾರ್ವಜನಿಕರಿಂದ ದೂರು ಸ್ವೀಕಾರ ಸಭೆ ನಡೆಸಲಿದ್ದಾರೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿನ ಹಿಂದಿನ ಲೋಕಾಯುಕ್ತ ಪ್ರಕರಣಗಳು ಬಾಕಿ ಇದ್ದಲ್ಲಿ, ಪೂರಕ ದಾಖಲೆಗಳೊಂದಿಗೆ ವರದಿ ಸಲ್ಲಿಸುವುದು ಹಾಗೂ ಸದರಿ ದಿನದಂದು ನಡೆಯಲಿರುವ ಕಾರ್ಯಕ್ರಮಕ್ಕೆ ಯಾರನ್ನೂ ನಿಯೋಜನೆ ಮಾಡದೇ ಖುದ್ದು ಹಾಜರಾಗಲು ಸೂಚಿಸಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಲು ತಿಳಿಸಿದ್ದಾರೆ.