ಜಿಲ್ಲೆ

ತಡರಾತ್ರಿ ಲಾರಿ-ಬಸ್​ ನಡುವೆ ಭೀಕರ ಅಪಘಾತ: ಡ್ರೈವರ್​ ಸ್ಥಿತಿ ಗಂಭೀರ, ಹಲವರಿಗೆ ಗಾಯ

arunakunigal

ಬಾಗಲಕೋಟೆ: ಇಳಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ತುಂಬ ಕ್ರಾಸ್​ನಲ್ಲಿ ಗುರುವಾರ ತಡರಾತ್ರಿ ಬಸ್​ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಸವ ಕಲ್ಯಾಣ ಘಟಕದ ಬೀದರ್ ವಿಭಾಗಕ್ಕೆ ಸೇರಿದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿತ್ತು. ಕಬ್ಬಿಣದ ಸಾಮಗ್ರಿ ತುಂಬಿಕೊಂಡು ಬರುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಬಸ್ ಚಾಲಕ ಸೇರಿ ಆರು ಜನರಿಗೆ ಗಾಯವಾಗಿದ್ದು, ಬಸ್ ಚಾಲಕ ಈರಣ್ಣ ಮಲಕೇರಿ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬಸ್ ಚಾಲಕ ಪ್ರಕಾಶ್, ನಿರ್ವಾಹಕ ಗೋಪಾಲ್ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್​ನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.