ಜಿಲ್ಲೆ

ಲಾರಿ ಡಿಕ್ಕಿ, ಬೈಕ್ ಸವಾರರಿಗೆ ಗಾಯ

ಇಂದಿರಾ ಎನ್ ಕೆ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಬಂಟರ ಭವನ ಬಳಿ ನಿಲ್ಲಿಸಿದ್ದ ಬೈಕ್‌ಗೆ ಲಾರಿಯೊಂದು ಡಿಕ್ಕಿಯಾಗಿ ನಿಲ್ಲಿಸದೆ ಪರಾರಿಯಾದ ಘಟನೆ ಶನಿವಾರ ನಡೆದಿದೆ. ಅಪಘಾತ ತೀವ್ರತೆಗೆ ಬೈಕ್ ಸಹಿತ ರಸ್ತೆಗೆ ಬಿದ್ದ ಸವಾರ ಅರುಣ್‌ಕುಮಾರ್, ಸಹಸವಾರ ಸುನೀಲ್ ಗಾಯಗೊಂಡಿದ್ದಾರೆ. ಗಾಯಾಳುಗಳು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.