ಜಿಲ್ಲೆ

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Mandya

ನಾಗಮಂಗಲ: ತಾಲೂಕಿನ ಕರಿಕ್ಯಾತನಹಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚನ್ನರಾಯಪಟ್ಟಣದಿಂದ ಮದ್ದೂರು ತಾಲೂಕಿನ ಕೊಪ್ಪದ ಶುಗರ್ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ.

ಲಾರಿಯಲ್ಲಿ ಚಾಲಕನನ್ನು ಹೊರತುಪಡಿಸಿ ಬೇರಾರೂ ಇಲ್ಲದ ಕಾರಣ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಸಂಪರ್ಕ ಕಡಿತಗೊಂಡಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.