ಜಿಲ್ಲೆ

ಆರತಿಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ

ಬಸವರಾಜ ವೀರಪ್ಪ ಗರಗ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಪಕ್ಕದ ಹಳ್ಳದಲ್ಲಿ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ -63ರಲ್ಲಿ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಬಿದ್ದಿದೆ. ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಸಂಪೂರ್ಣ ಜಖಂಗೊಂಡಿದೆ  ಲಾರಿಯಲ್ಲಿದ್ದ ಸರಕು ತುಂಬಿದ ಮೂಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಹಳ್ಳದಲ್ಲಿ ಬಿದ್ದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.