ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಗಟಾರದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಭಾನುವಾರ ನಡೆದಿದೆ.
ಸರಕು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದು ಧರೆಗೆ ಗುದ್ದಿದೆ. ಲಾರಿ ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ದು, ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.