ಜಿಲ್ಲೆ

ಲಾರಿ ಪಲ್ಟಿ, ಚಾಲಕ ಪಾರು

ಸೌಮ್ಯ ಆರ್

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಅ.27ರಂದು ರಾತ್ರಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಉಮೇಶ್ ಎಂಬುವರು ತರಚಿದ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹಾಸನ ಕಡೆಯಿಂದ ಮಂಗಳೂರಿಗೆ ಮರದ ಹುಡಿ ಸಾಗಾಟ ಮಾಡುತ್ತಿದ್ದ ಲಾರಿ ಮಣ್ಣಗುಂಡಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ಚಾಲಕ ಮಾತ್ರ ಇದ್ದು, ಅವರು ತರಚಿದ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.