ಜಿಲ್ಲೆ

ಕೊಡ್ಯಕಲ್ಲಿನಲ್ಲಿ ಮಗುಚಿ ಬಿದ್ದ ಲಾರಿ

ಸೌಮ್ಯ ಆರ್

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಮಂಗಳವಾರ ತಡರಾತ್ರಿ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದಿದೆ. ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿದೆ. ಲಾರಿ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.