ಕೂಡ್ಲಿಗಿ: ತಾಲೂಕಿನ ಶಿವಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಶನಿವಾರ ಬೆಳಗ್ಗೆ ಲಾರಿಯೊಂದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟುಹೋಗಿದೆ.
ಬಾಗಲಕೋಟೆಯಿಂದ ಬೆಂಗಳೂರು ಕಡೆಗೆ ಶೇಂಗಾ ಹಿಂಡಿ ತುಂಬಿದ್ದ ಲಾರಿ ಏಕಾಏಕಿ ಪಲ್ಟಿಯಾಗಿ ಲಾರಿ ಸಮೇತ ಸರಕು ಕೂಡ ಬೆಂಕಿಗಾಹುತಿಯಾಗಿದೆ. ಲಾರಿ ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದ ಕೂಡ್ಲಿಗಿ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಕೂಡ್ಲಿಗಿ ಠಾಣೆ ಪಿಎಸ್‌ಐ ಪ್ರಕಾಶ್.ಸಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.